ಹುಬ್ಬಳ್ಳಿ: ಇಲ್ಲಿಯ ಎಪಿಎಂಸಿ ಆವರಣದಲ್ಲಿರುವ ಕೂಲಿ ಕಾಮಿರ್ಕರ ಮಕ್ಕಳೇ ಹೆಚ್ಚಾಗಿ ಓದುವ ಸರ್ಕಾರಿ ಶಾಲೆಗೆ ಮಾಜಿ ಶಿಕ್ಷಣ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಗುರುವಾರ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಬಹುತೇಕ ದೇಣಿಗೆಯಿಂದಲೇ ನಡೆಯುತ್ತಿರುವ ಶಾಲೆ ಬಗ್ಗೆ ಮಾಹಿತಿ ಪಡೆದರು. ಈಗಾಗಲೇ ತಾವು ಆಥಿರ್ಕ ನೆರವು ನೀಡಿದ್ದು, ಮತ್ತೆ ಐದು ಲಕ್ಷ ರೂಪಾಯಿ ಕೊಡುವುದಾಗಿ ಘೋಷಣೆ ಮಾಡಿದರು. ಶ್ರಮಿಕರ ಮಕ್ಕಳಿಗೂ ಇಂಗ್ಲಿಷ್ ಭಾಷೆ ಕಲಿಸಬೇಕು. ಇದರಿಂದ ಎಲ್ಲಿಯಾದರೂ ಬದುಕು ಕಟ್ಟಿಕೊಳ್ಳಲು ಅವರಿಗೆ ಅನುಕೂಲವಾಗುತ್ತದೆ ಎಂದರು.
ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಹೆಚ್ಚಿನ ಅನುದಾನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಪಿಎಂಸಿ ಸಚಿವರೊಂದಿಗೆ ಚಚಿರ್ಸುತ್ತೇನೆ. ಸರ್ಕಾರ ಆರೋಗ್ಯ ಹಾಗೂ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಶಾಲೆಯನ್ನು ದತ್ತು ತೆಗೆದುಕೊಳ್ಳುವ ಕುರಿತು ಯೋಚನೆ ಮಾಡುತ್ತೇನೆ ಎಂದರು.
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಮುಖ್ಯೋಪಾಧ್ಯಾಯ ಎ.ಪಿ. ಬೀಡಿಕರ, ಡಾ. ರಾಮು ಮೂಲಗಿ, ಕಾಮಿರ್ಕರ ಮುಖಂಡ ಗುರುಸಿದ್ದಪ್ಪ ಅಂಬಿಗೇರ ಇತರರು ಪಾಲ್ಗೊಂಡಿದ್ದರು.