ಮಡಿಕೇರಿ:
ಸ್ವಾತಂತ್ರö್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಮತ್ತು ಅಮರ ಸುಳ್ಯ ದಂಗೆಯ ಹೋರಾಟಗಾರರ ವಿಷಯವನ್ನು ಪಠ್ಯಪುಸ್ತಕದಲ್ಲಿ ಮರು ಸೇರ್ಪಡೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರೂ ಆದ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೋಟೆ ಆವರಣದಲ್ಲಿ ಗುರುವಾರ ಏರ್ಪಡಿಲಾಗಿದ್ದ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
1837 ರಲ್ಲಿ ಸ್ವಾತಂತ್ರö್ಯಕ್ಕಾಗಿ ಬ್ರಿಟಿಷರೊಡನೆ ಹೊರಾಡಿ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರö್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಹಾಗೂ ಅಮರ ಸುಳ್ಯ ದಂಗೆ ಬಗ್ಗೆ ಈ ಹಿಂದೆ 2012 ರಿಂದ 2019 ರ ವರೆಗೆ 6 ನೇ ತರಗತಿ ರಾಜ್ಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಉಲ್ಲೇಖವಾಗಿತ್ತು ಎಂಬ ಬಗ್ಗೆ ಕೊಡಗು ಗೌಡ ಯುವ ವೇದಿಕೆ ಗಮನ ಸೆಳೆದಿದ್ದು, ಈ ಸಂಬAಧ ಸರ್ಕಾರದ ಗಮನ ತರಲಾಗುವುದು. ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ್ದು, ಇತಿಹಾಸವನ್ನು ಯಾರೂ ಸಹ ತಿರುಚಲು ಸಾಧ್ಯವಿಲ್ಲ. ಜಾತಿ, ಧರ್ಮವನ್ನು ಮೀರಿ ದೇಶಕ್ಕಾಗಿ ಪಣತೊಟ್ಟ ವೀರ ಯೋಧರನ್ನು ಸದಾ ಸ್ಮರಿಸಬೇಕು. ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಇತಿಹಾಸದ ಪುಟದಲ್ಲಿ ಇರಬೇಕು. ಆ ನಿಟ್ಟಿನಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ವೀರ ಯೋಧರ ಚರಿತ್ರೆ ಉಳಿಸಲು ಕೈಜೋಡಿಸಲಾಗುವುದು ಎಂದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ ಸ್ವಾತಂತ್ರö್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ ಸ್ಥಳ ಕೋಟೆ ಆವರಣದಲ್ಲಿದ್ದು, ಈ ಜಾಗವು ಕೇಂದ್ರ ಪುರಾತತ್ವ ಇಲಾಖೆ ವ್ಯಾಪ್ತಿಗೆ ಬರಲಿದೆ. ಆದ್ದರಿಂದ 15*15 ಅಳತೆಯಲ್ಲಿ ಇಂಟರ್‌ಲಾಕ್ ಅಳವಡಿಸಿ ಅಭಿವೃದ್ಧಿಪಡಿಸಲು ಮುಂದಾಗಬೇಕಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯೂ ಇಂಟರ್‌ಲಾಕ್ ಅಳವಡಿಸಿ, ಅಭಿವೃದ್ಧಿಮಾಡಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಬೇಕಿದೆ ಎಂದರು.
ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಮಾತನಾಡಿ ಗುಡ್ಡೆಮನೆ ಅಪ್ಪಯ್ಯ ಗೌಡ ರಾಷ್ಟçದಲ್ಲಿ ಸ್ವಾತಂತ್ರö್ಯ ದಂಗೆಗೂ ಮೊದಲೇ ಸ್ವಾತಂತ್ರö್ಯಕ್ಕಾಗಿ ಹೋರಾಡಿದ್ದು, ಇವರ ಹೆಸರನ್ನು ಸದಾ ಸ್ಮರಿಸುವಂತಾಗಬೇಕು. ‘ಸ್ವಾತಂತ್ರö್ಯಕ್ಕಾಗಿ ಹೋರಾಡಿದವರನ್ನು ಜಾತಿಯಿಂದ ಗುರುತಿಸಬಾರದು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರಲ್ಲಿಯೇ ಹೆಚ್ಚಿನ ಜಾತೀಯತೆ ಕಂಡುಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ನಿಡ್ಯಮಲೆ ಡಾ.ಎ. ಜ್ಞಾನೇಶ್ ಮಾತನಾಡಿ 1837 ರಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡ ಅವರು ಹಾಗೂ ಅಮರ ಸುಳ್ಯ ಕ್ರಾಂತಿಗೆ ಇತಿಹಾಸವಿದೆ. ಗುಡ್ಡೆಮನೆ ಅಪ್ಪಯ್ಯ ಗೌಡ ಸ್ವಾತಂತ್ರö್ಯ ಪೂರ್ವದಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದ್ದಾರೆ. ಭಾರತದಲ್ಲಿ ಸ್ವಾತಂತ್ರö್ಯದ ಕಿಚ್ಚು ಹಚ್ಚಿರುವುದನ್ನು ಯಾರು ಸಹ ಮರೆಯಬಾರದು ಎಂದು ಹೇಳಿದರು.
ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಡಿವೈಎಸ್‌ಪಿ ಮಹೇಶ್ ಕುಮಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ ಸೇರಿದಂತೆ ಹಲವು ಗಣ್ಯರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಗುಡ್ಡೆಮನೆ ಅಪ್ಪಯ್ಯಗೌಡ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು.
ಭಾರತ್ ಸೇವಾದಳದ ರೇವತಿ ರಮೇಶ್, ಕಡ್ಲೇರ ತುಳಸಿ ಮೋಹನ್ ಹಾಗೂ ಚೊಕ್ಕಾಡಿ ಪೇಮ ರಾಘವಯ್ಯ ಅವರು ಗುಡ್ಡೆಮನೆ ಅಪ್ಪಯ್ಯಗೌಡರ ಕುರಿತು ‘ನಮನ ಗೀತೆ’ ಹಾಗೂ ರಾಷ್ಟçಗೀತೆ ಹಾಡಿದರು. ಲಿಟ್ಲ್ ಪ್ಲವರ್ ಶಾಲೆಯ ಮುಖ್ಯಸ್ಥರಾದ ಸುನಿತಾ ಪ್ರೀತು ಮತ್ತು ವಿದ್ಯಾರ್ಥಿಗಳು ಆಶಯ ಗೀತೆ ಹಾಡಿದರು.