ಜಿಲ್ಲೆ

ಡಾ.ಕಯ್ಯಾರ ಭವನ ರಸ್ತೆ ಅಭಿವೃದ್ಧಿಗೆ ಮನವಿ

ಕಾಸರಗೋಡು: ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಸ್ಮಾರಕ ಕನ್ನಡ ಭವನಕ್ಕೆ ಮುಖ್ಯ ರಸ್ತೆಯಿಂದ ತೆರಳುವ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅವರಿಗೆ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕಾಸರಗೋಡು ಜಿಲ್ಲಾಧಿಕಾರಿ ಚೇಂಬರ್‌ನಲ್ಲಿ ಮನವಿ ಸಲ್ಲಿಸಲಾಯಿತು.

ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲಾಯಿತು.

ನಂತರ ಕಾಸರಗೋಡು ಬದಿಯಡ್ಕದಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಭವನ ನಿರ್ಮಾಣದ ಅಂತಿಮ ಕಟ್ಟಡದ ಪ್ರಗತಿ ಪರಿಶೀಲನೆ ನಡೆಸಲಾಯಿತು. ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಬದಿಯಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷ ಮಾಹಿಲ್ ಕೆಲೋಟ್, ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು. ಎಣ್ಮಕಜೆ ಪಂಚಾಯಿತಿ ಶೇಣಿ ಶ್ರೀ ಶಾರದಾಂಬಾ ಕನ್ನಡ ಮಾಧ್ಯಮ ಶಾಲೆಗೆ ಭೇಟಿ ನೀಡಿ ಕಾಮಗಾರಿ ಅವಲೋಕನ ನಡೆಸಲಾಯಿತು.