ಜಿಲ್ಲೆ

ಸಾಹಿತ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡುವಂತೆ ಕಸಾಪ ಅಧ್ಯಕ್ಷರಿಗೆ ಮನವಿ

ಡಿ.20 ರಿಂದ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆದ್ಯತ ನೀಡುವ ಮೂಲಕ ಸಮಾನ ಅವಕಾಶ ಒದಗಿಸಬೇಕೆಂದು ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘ ಒತ್ತಾಯಿಸಿದೆ.

ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ಚಂದ್ರಕಾಂತ ಭಂಡಾರೆ, ಈ ಹಿಂದಿನ ಸಮ್ಮೇಳನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳು, ಕಲಾವಿದರಿಗೆ ಸರಿಯಾದ ಅವಕಾಶ ದೊರೆತಿಲ್ಲ. ನಂಡುಂಡಪ್ಪ ವರದಿಯಲ್ಲಿ ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಅಭಿವೃದ್ಧಿಗೂ ಅವಕಾಶ ನೀಡುವ ಪ್ರಸ್ತಾಪವಿದ್ದು, ಹಿಂದಿನ ತಪ್ಪು ಮರುಕಳಿಸದಂತೆ ಈ ಸಮ್ಮೇಳನದಲ್ಲಿ ಸರ್ವರಿಗೂ ಸಮಾನ ಅವಕಾಶ ದೊರೆಯುವಂತೆ ಎಚ್ಚರ ವಹಿಸಲು ಕೋರಿದ್ದಾರೆ.