ಸೋಮವಾರಪೇಟೆ ಶಾಸಕ ಡಾ.ಮಂತರ್‌ಗೌಡ ಅವರಿಗೆ ಅರೆಸೇನಾ ಪಡೆಯ ನಿವೃತ್ತ ಯೋಧರ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು. 
ಜಿಲ್ಲೆ

ಬೇಡಿಕೆಗಳ ಈಡೇರಿಕೆಗಾಗಿ ಶಾಸಕರಿಗೆ ಮನವಿ

ಸೋಮವಾರಪೇಟೆ: ಅರೆಸೇನಾ ಪಡೆಯ ನಿವೃತ್ತ ಯೋಧರ ಒಕ್ಕೂಟದಿಂದ ಶಾಸಕ ಮಂತರ್ ಗೌಡ ಅವರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಬುಧವಾರ ಸಲ್ಲಿಸಲಾಯಿತು.

ನಿವೃತ್ತ ಯೋಧರ ಒಕ್ಕೂಟಕ್ಕೆ ನಿವೇಶನ ನೀಡುವುದು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ಒಳಪಡಿಸಿ ಸೌಲಭ್ಯ ನೀಡುವುದು, ತಪ್ಪಿದ್ದಲ್ಲಿ ಅರೆಸೇನಾ ಪಡೆಯ ನಿವೃತ್ತ ಸೈನಿಕರಿಗೆ ಅರೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ನಿಗಮ ಸ್ಥಾಪನೆ ಮಾಡುವುದು. ಅರೆ ಸೇನಾಪಡೆ ನಿವೃತ್ತರಿಗೆ ಸಿಜಿಎಚ್‌ಎಸ್ ಆರೋಗ್ಯ ಕಾರ್ಡ್ ಒದಗಿಸಿ ಸಿಜಿಎಚ್‌ಎಸ್ ವೆಲ್‌ನೆಸ್ ಸೆಂಟರ್ ಸ್ಥಾಪನೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಲಾಯಿತು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಒಕ್ಕೂಟದ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು. ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಯತೀಶ್, ಸಂಚಾಲಕ ಎನ್.ಎಂ. ಭೀಮಯ್ಯ, ಜಂಟಿ ಕಾರ್ಯದರ್ಶಿ ಬಿ.ಎನ್. ರಾಜಶೇಖರ್ ಇದ್ದರು.