ವಿವಿಧ ಬೇಡಿಕೆಗಳ ಈಡೇರಿಕೆಗೆ ಸೋಮವಾರಪೇಟೆ ತಾಲೂಕು ಘಟಕ ಗ್ರಾಮ ಸಹಾಯಕರ ಸಂಘದಿಂದ ಶಾಸಕ ಡಾ.ಮಂತರ್‌ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ಸುರೇಶ್, ಶಶಿಕುಮಾರ್, ಲೀನಾ ಇದ್ದರು. 
ಜಿಲ್ಲೆ

ಬೇಡಿಕೆ ಈಡೇರಿಕೆಗೆ ಶಾಸಕರಿಗೆ ಮನವಿ

ಸೋಮವಾರಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಸಹಾಯಕರ ಸಂಘ ಕಾರ್ಯಕರ್ತರು ಇತ್ತೀಚೆಗೆ ಶಾಸಕ ಡಾ.ಮಂತರ್‌ಗೌಡ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದರು.

ಗ್ರಾಮ ಸಹಾಯಕರುಗಳಿಗೆ ಸೇವಾ ಭದ್ರತೆ, ಕನಿಷ್ಠ ವೇತನ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು. ಸಂಘದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸುವುದಾಗಿ ಶಾಸಕರು ಭರವಸೆ ನೀಡಿದರು.

ಇದೇ ಸಂದರ್ಭ ಶಾಸಕ ಮಂತರ್‌ಗೌಡ ಅವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು. ಗ್ರಾಮ ಸಹಾಯಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸುರೇಶ್, ಪದಾಧಿಕಾರಿಗಳಾದ ಶಶಿಕುಮಾರ್, ಲೀನಾ ಸೇರಿದಂತೆ ಸದಸ್ಯರು ಇದ್ದರು.