ಪ್ರವೀಣ್ ಚೌಗಲೆ 
ಜಿಲ್ಲೆ

ನ.20ಕ್ಕೆ ಚೌಗುಲೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಆದೇಶ

ಇಂದಿರಾ ಎನ್ ಕೆ

ಉಡುಪಿ: ನೇಜಾರಿನಲ್ಲಿ ನಡೆದಿದ್ದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿಯನ್ನು ನ.20 ಹಾಗು 21ರಂದು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎ.ಸಮೀವುಲ್ಲಾ ಆದೇಶಿಸಿದರು. ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ವಾದ ಮಂಡಿಸಿ, ಆರೋಪಿಯ ಗುರುತು ಪತ್ತೆಗಾಗಿ ಪ್ರವೀಣ್ ಚೌಗಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅರ್ಜಿ ಸಲ್ಲಿಸಿದರು.

ಅಭಿಯೋಜಕರ ವಾದವನ್ನು ಆಲಿಸಿದ ನ್ಯಾಯಾಧೀಶರು, ನ.20ರಂದು ಸೂಕ್ತ ಭದ್ರತೆಯೊಂದಿಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮಲ್ಪೆ ಪೋಲಿಸ್ ನಿರೀಕ್ಷಕರಿಗೆ ನಿರ್ದೇಶಿಸಿದರು. ನ. 20 ರಂದು 1 ಹಾಗೂ 2 ಹಾಗು ನ.21ರಂದು 3 ಹಾಗೂ 4ನೇ ಸಾಕ್ಷಿದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಯಿತು. ಗುರುವಾರ ಆರೋಪಿ ಪ್ರವೀಣ್ ಚೌಗಲೆಯನ್ನು ಬೆಂಗಳೂರಿನ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.