ಜಿಲ್ಲೆ

ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

Kopala - Raveendra V K

ಕೊಪ್ಪಳ: ಗಂಗಾವತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯಾಧಿಕಾರಿಗಳ ಕಾರ್ಯಾಲಯದಿಂದ 2024-25ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಹಾಗೂ ಸಮನ್ವಯ ಶಿಕ್ಷಣ ಶೀರ್ಷಿಕೆಯಡಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಫಿಜಿಯೋಥೆರಪಿಸ್ಟ್ ಹುದ್ದೆಗೆ ಹಾಗೂ ಶಾಲಾ ಸಿದ್ಧತೆ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಆಯಾ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಿಜಿಯೋಥೆರಪಿಸ್ಟ್ ಮತ್ತು ಆಯಾ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಜುಲೈ 26ರ ಒಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಂಗಾಪುರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಗಂಗಾವತಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.