ಜಿಲ್ಲೆ

750ಕ್ಕೂ ಹೆಚ್ಚು ನಾಗರಿಕ ಸೇವೆ ನೀಡುವ ಗ್ರಾಮಒನ್ ಕೇಂದ್ರ ಪ್ರಾರಂಭಕ್ಕೆ ಅವಕಾಶ: ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಕೇಂದ್ರಗಳ ಮಾಹಿತಿ ಇಲ್ಲಿದೆ ನೋಡಿ....

ಮಂಡ್ಯ: ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಸೇವಾಸಿಂಧು ಯೋಜನೆಯಡಿ ರೂಪಿಸಿರುವ ಗ್ರಾಮ ಒನ್ ಕೇಂದ್ರ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಯೋಜನೆಯ ಉದ್ದೇಶವಾಗಿದೆ. ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಆದರೆ ಕಾರಣಾಂತರಗಳಿಂದ ಖಾಲಿ ಇರುವ ಗ್ರಾಪಂ ವ್ಯಾಪ್ತಿಯಲ್ಲಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. 

ಅದರಂತೆ ಆಸಕ್ತರು ವೆಬ್‌ಸೈಟ್ https://kal-mys.gramaone.karnataka.gov.in/index.php/applicant-registration-initial-step ಮೂಲಕ ಡಿ.15ರೊಳಗೆ ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಿಸಿದ ವಿವರ ಹಾಗೂ ದಾಖಲಾತಿಯ ಬಗ್ಗೆ ವೆಬ್‌ಸೈಟ್‌ನಲ್ಲಿಯೇ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.