ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ(ಯುವಿಸಿಇ) ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಎಂ.ಟೆಕ್/ಪಿಎಚ್‌ಡಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ವಿವಿಯ ವೆಬ್‌ಸೈಟ್ http://www.uvce.karnataka.in ಮೂಲಕ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ನಗರದ ಕೆ.ಆರ್.ವೃತ್ತದ ಬಳಿಯ ವಿವಿ ಕ್ಯಾಂಪಸ್‌ನ ಕುಲಸಚಿವ ಕಚೇರಿಗೆ ಮೇ 12ರೊಳಗೆ ಸಲ್ಲಿಸಬಹುದು ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.