ಹಾನಗಲ್ಲ: ಹೊಲದಲ್ಲಿ ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಕೃಷಿಭಾಗ್ಯ ಯೋಜನೆಯಡಿ ಕೃಷಿಹೊಂಡ ನಿರ್ವಣಕ್ಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ಅಂಗರಗಟ್ಟಿ, ಕೃಷಿಹೊಂಡ ನಿರ್ವಣಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ಸಹಾಯಧನದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.