ಜಿಲ್ಲೆ

ನಗರ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ವಿಕಲಚೇತನರಿಂದ ಅರ್ಜಿ ಆಹ್ವಾನ

ಬಾಬುರಾವ ಯಡ್ರಾಮಿ

ಯಾದಗಿರಿ :  ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಪುರಸಭೆ ಕಾರ್ಯಾಲಯ ಗುರುಮಠಕಲ್‌ದಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ಗೌರವ ಧನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಅವರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪುರಸಭೆ ಕಾರ್ಯಾಲಯದಲ್ಲಿ ಖಾಲಿ ಇರುವ ನಗರ ಪುನರ್ವಸತಿ ಕಾರ್ಯಕರ್ತರ ಸ್ಥಾನಕ್ಕೆ ತಾತ್ಕಾಲಿಕ ಗೌರವ ಧನ ಆಧಾರದ ಮೇಲೆ ಕಾರ್ಯನಿರ್ವಹಿಸಲು ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ವಿಕಲಚೇತನರಿಂದ ದಾಖಲಾತಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ ವರ್ಗಾವಣಾ ಪ್ರಮಾಣ ಪತ್ರ, ವಿಕಲಚೇತನ ಗುರುತಿನ ಪ್ರಮಾಣ ಪತ್ರ, ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 2 ಫೋಟೋ ಲಗತ್ತಿಸಬೇಕು, 2025ರ ಜೂನ್ 26ರ ಸಂಜೆ 5.30 ಗಂಟೆಯ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಠಡಿ ಸಂಖ್ಯೆ ಬಿ11, ಬಿ12 ನೆಲಮಹಡಿ ಜಿಲ್ಲಾಡಳಿತ ಭವನ ಯಾದಗಿರಿ ಇಲ್ಲಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.