ಜಿಲ್ಲೆ

ಅರ್ಜಿ ಆಹ್ವಾನ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ನಶಾ ಮುಕ್ತ ಭಾರತ ಜಿಲ್ಲಾ ಪ್ರಚಾರ ಸಮಿತಿ ರಚಿಸಬೇಕಿದೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿಯನ್ವಯ ಮಾದಕ ಮತ್ತು ವ್ಯಸನ ಮುಕ್ತ ವಲಯ, ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಂದ ಮತ್ತು ನಿವೃತ್ತ ಸರ್ಕಾರಿ ನೌಕರರಿಂದ ಸದಸ್ಯತ್ವ, ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಮತ್ತು ನಿವೃತ್ತ ಸರ್ಕಾರಿ ನೌಕರರು ಆ. 19ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪಕಿರ್ಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.