ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅ. 15ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.