ವಿಜಯವಾಣಿ ಸುದ್ದಿಜಾಲ ಧಾರವಾಡ
ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024- 25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಸಂಬAಽಸಿದ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ 5000 ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇಕಾರ ಸಹಕಾರ ಸಂಘ- ಸಂಸ್ಥೆಗಳ ಮೂಲಕ ಅಥವಾ ನೇರವಾಗಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಅ. 20ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.