ಜಿಲ್ಲೆ

ಅರ್ಜಿ ಆಹ್ವಾನ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಪಶುಪಾಲನೆ ಮತ್ತು ಪಶು ವೈದ್ಯಕಿಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಚಾರಿ ಅಥವಾ ವಲಸೆ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡುವ ಯೋಜನೆಗಾಗಿ ವಲಸೆ ಕುರಿಗಾಹಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಸ್ಥಳಿಯ ಗ್ರಾಮ ಆಡಳಿತಾಧಿಕಾರಿ ಮತ್ತು ಪಶು ವೈದ್ಯಾಧಿಕಾರಿಗಳಿಂದ ದೃಢೀಕರಣ ಪ್ರತಿಗಳನ್ನು ಲಗತ್ತಿಸಿ ಅ. 20ರೊಳಗೆ ಪಶು ವೈದ್ಯಕಿಯ ಸಂಸ್ಥೆಗಳಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.