ಧಾರವಾಡ: ಅಖಿಲ ಭಾರತ ಸಹಕಾರ ಸಪ್ತಾಹ ನಿಮಿತ್ತ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಸಹಕಾರಿಗಳು 10 ವರ್ಷ ಸೇವೆ ಸಲ್ಲಿಸಿರಬೇಕು. ಸಹಕಾರ ಕ್ಷೇತ್ರದಲ್ಲಿ ಪ್ರಾಥಮಿಕ ಹಂತದಿಂದ ರಾಜ್ಯ ಮಟ್ಟದವರೆಗೆ ಸೇವೆ ಸಲ್ಲಿಸಿರಬೇಕು. ಆಸಕ್ತರು ಅ. 27ರೊಳಗೆ ಅಧ್ಯಕ್ಷರು, ಜಿಲ್ಲಾ ಸಹಕಾರಿ ಯೂನಿಯನ್, ನಾರಾಯಣಪುರ, ಧಾರವಾಡ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.