ವಿಜಯವಾಣಿ ಸುದ್ದಿಜಾಲ ಧಾರವಾಡ
ಪೋಕ್ಸೋ 2012ರ ಕಾಯ್ದೆಯಡಿ ಸೆನ್-39ರ ಅನುಷ್ಠಾನ ಸಂಬಂಧ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ, ಸಮಾಜಶಾಸ್ತ್ರ, ಮನಃಶಾಸ್ತ್ರ ಅಥವಾ ಮಕ್ಕಳ ಅಭಿವೃದ್ಧಿ ವಿಷಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವವರು ಅರ್ಜಿ ಸಲ್ಲಿಸಬಹುದು.
ಅರ್ಹರು ಅಗತ್ಯ ದಾಖಲೆಗಳೊಂದಿಗೆ ಸರ್ಕಾರಿ ವೀಕ್ಷಣಾಲಯ, ಡಿ.ಸಿ. ಕಾಂಪೌಂಡ, ಹಿಂದಿ ಪ್ರಚಾರ ಸಭಾ ಹತ್ತಿರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಅ, 30ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.