ವಿಜಯವಾಣಿ ಸುದ್ದಿಜಾಲ ಧಾರವಾಡ
ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆ ಸಹಯೋಗದಲ್ಲಿ 18 ರಿಂದ 45ವರ್ಷದೊಳಗಿನ ಗ್ರಾಮೀಣ ಭಾಗದ ಯುವಕರಿಗೆ ಹಳಿಯಾಳದಲ್ಲಿ ವಿವಿಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜನವರಿಯಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಮತ್ತು ಫೆಬ್ರವರಿಯಲ್ಲಿ ಮಹಿಳೆಯರಿಗೆ ವಸ್ತ್ರವಿನ್ಯಾಸ (ಹೊಲಿಗೆ) ಕುರಿತು ಉಚಿತ ತರಬೇತಿ ನೀಡಲಾಗುವುದು. ಆಸಕ್ತರು ಜ. 10ರೊಳಗೆ ಹೆಸರು ನೋಂದಾಯಿಸಬೇಕು ಎಂದು ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟ್ ಸಂಸ್ಥೆ ನಿರ್ದೇಶಕ ಪ್ರಶಾಂತ ಬಡ್ಡಿ ತಿಳಿಸಿದ್ದಾರೆ.