ಜಿಲ್ಲೆ

ಅರ್ಜಿ ಆಹ್ವಾನ

Dharwada - Vikram Nadiger

ಧಾರವಾಡ: ಕನಾರ್ಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 3 ವರ್ಷಗಳ ಅವಧಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡದಲ್ಲಿ ಪ್ಯಾನಲ್​ ವಕೀಲರನ್ನು ನೇಮಿಸಲು ನಿರ್ದೇಶಿಸಿದೆ. ಹೀಗಾಗಿ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹೊಸದಾಗಿ ಪ್ಯಾನಲ್​ ವಕೀಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ನ್ಯಾಯವಾದಿಗಳು ನಿಗದಿತ ಅರ್ಜಿ ನಮೂನೆಯನ್ನು ಮೇ 2ರೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ. ರಮಾ ತಿಳಿಸಿದ್ದಾರೆ.

-------------------