ವಿಜಯವಾಣಿ ಸುದ್ದಿಜಾಲ ಧಾರವಾಡ
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ರಾಜ್ಯದ 270 ಸರ್ಕಾರಿ ಹಾಗೂ 192 ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ನಲ್ಲಿ ಮೆರಿಟ್ ಹಾಗೂ ಮೀಸಲಾತಿ ಆಧಾರಿತ ವಿವಿಧ ವೃತ್ತಿ, ಘಟಕಗಳಲ್ಲಿ ಕೈಗಾರಿಕಾ ತರಬೇತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿಯ ಅನುಸಾರ ಎಸ್ಸೆಸ್ಸೆಲ್ಸಿ ಉತ್ತೀರ್ಣ, ಅನುತ್ತೀರ್ಣರಾದ, 8ನೇ ತರಗತಿಯಲ್ಲಿ ಉತ್ತೀರ್ಣರಾದ ಅರ್ಹ ಆಸಕ್ತರು ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಎನ್ಸಿವಿಟಿ ಸಂಯೋಜಿತ ಸಿಟಿಎಸ್ ಯೋಜನೆಯಡಿ ಇಂಜಿನಿಯರಿಂಗ್ ಹಾಗೂ ನಾನ್ ಇಂಜಿನಿಯರಿಂಗ್ ವೃತ್ತಿಗಳಿಗೆ ಮೇ 28ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲಾಭಿವೃದ್ಧಿ ಕೇಂದ್ರ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.