ಧಾರವಾಡ: ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ವಸತಿ ಶಾಲೆ, ಸೈದಾಪುರದಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅನುಗುಣವಾಗಿ ಭತಿರ್ ಮಾಡಲು 1 ನೇ ತರಗತಿಯಿಂದ 5 ನೇ ತರಗತಿವರೆಗಿನ ಅರ್ಹ ಪ.ಜಾತಿ, ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾಥಿರ್ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿಳನ್ನು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸರ್ಕಾರಿ ವಸತಿ ಶಾಲೆ, ಸೈದಾಪುರ ವಿಳಾಸದಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದು. ಪ್ರವೇಶ ಬಯಸುವ ವಿದ್ಯಾಥಿರ್ಗಳು ಅಜಿರ್ ಭತಿರ್ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೂ. 15ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.