ಜಿಲ್ಲೆ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು:2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ವೃತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನಾಂಕವಾಗಿದ್ದು,  https://shp.karnataka.gov.in    ಮೂಲಕ ಅರ್ಜಿ ಸಲ್ಲಿಸಲಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್  https://bcwd.karnataka.gov.in ಅಥವಾ ದೂ.ಸಂ: 8050770005 ಅನ್ನು ಸಂಪರ್ಕಿಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.