ಜಿಲ್ಲೆ

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೆ.ಎನ್.ರಾಘವೇಂದ್ರ

ಮಂಡ್ಯ: ಪ್ರಸಕ್ತ ಸಾಲಿನಲ್ಲಿ ಕೃಷಿ ಪ್ರಶಸ್ತಿಗೆ ರೈತ ಮತ್ತು ರೈತ ಮಹಿಳೆಯಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿರುವ ಭತ್ತ(ನೀರಾವರಿ) ಮತ್ತು ರಾಗಿ ಖುಷ್ಕಿ ಬೆಳೆಗೆ ರಾಜ್ಯ/ಜಿಲ್ಲಾ/ತಾಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಅರ್ಜಿಯನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆ.31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ವಿ.ಎಸ್.ಅಶೋಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.