ಜಿಲ್ಲೆ

ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ 2013ರ ಅನ್ವಯ ಜಿಲ್ಲಾ ಮಟ್ಟದ ಜಾಗೃತ ಸಮಿತಿ ರಚಿಸಲು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಅಥವಾ ಜಿಲ್ಲಾ ಮಟ್ಟದಲ್ಲಿ ವಾಸಿಸುವ ಸಮುದಾಯವನ್ನು ಪ್ರತಿನಿಸುತ್ತಿರುವ 4 ಜನ ಮೀರದಂತೆ ಸಾಮಾಜಿಕ ಕಾರ್ಯಕರ್ತರು (ಇಬ್ಬರು ಮಹಿಳೆಯರು) ಇರಬೇಕು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ದಾಖಲಾತಿಗಳೊಂದಿಗೆ ಫೆ. 28ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.