ವಿಜಯವಾಣಿ ಸುದ್ದಿಜಾಲ ಧಾರವಾಡ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿಎಚ್‌ಟಿಟಿ) ಕೋರ್ಸ್ ಪ್ರವೇಶಕ್ಕೆ ಪುರುಷ ಮತ್ತು ಮಹಿಳಾ ಸೇರಿ 39 ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು khtigadag.ac.in/AdmissionForm.pdf ನಿಂದ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಚಾರ್ಯರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ- ಬೆಟಗೇರಿ- 582102 ವಿಳಾಸಕ್ಕೆ ಜೂ. 15ರೊಳಗೆ ಸಲ್ಲಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.