ಜಿಲ್ಲೆ

ಸರ್ಕಾರಿ ಕೋಟಾದಡಿ ಸೀಟು ಭರ್ತಿಗೆ ಅರ್ಜಿ ಆಹ್ವಾನ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆಯ ನಂತರ ಮುಖ್ಯ ಆವರಣ ಹಾಗೂ ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಉಳಿದಿರುವ ಎಂಸಿಎ ಕೋರ್ಸ್‌ನ ಸರ್ಕಾರಿ ಕೋಟಾದಡಿಯಲ್ಲಿ ಸೀಟು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜ.7ರೊಳಗೆ ಅರ್ಜಿ ಸಲ್ಲಿಸಬಹುದು. ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಜ.9ರಂದು ಆಯಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಭರಿಸಿ ಧೃಡಿಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜ.8ರ ಸಂಜೆ 5 ಗಂಟೆಯೊಳಗೆ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರಗಳ ಗಣಕ ವಿಜ್ಞಾನ ವಿಭಾಗಗಳಲ್ಲಿ ಸಲ್ಲಿಸಬಹುದು. ಮಾಹಿತಿಗೆ ದೂ. 08312565244 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.