ಹುನಗುಂದ: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಹುನಗುಂದ ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ/ ನಂತರದ ಬಾಲಕರ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನಾಂಕವಾಗಿದೆ. ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಇತರ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಯ ಕಳೆದ ಸಾಲಿನ ಅಂಕಪಟ್ಟಿ ಪ್ರತಿ (ಎಸ್‌ಎಸ್‌ಪಿ ಸಂಖ್ಯೆಯೊಂದಿಗೆ), ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ ಪ್ರತಿ (ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಮಾತ್ರ), ವಿದ್ಯಾರ್ಥಿ ಹಾಗೂ ತಂದೆ ತಾಯಿಯ ಆಧಾರ್ ಕಾರ್ಡ್ ಪ್ರತಿ, ವಿದ್ಯಾರ್ಥಿಯ ಜಾತಿ ಹಾಗೂ ಆದಾಯ ಪ್ರಮಾಣ ಪತ್ರದ ಪ್ರತಿ, ವಿದ್ಯಾರ್ಥಿಯ ಇತ್ತೀಚಿನ 2 ಪಾಸ್‌ಪೋರ್ಟ್ ಸೈಜ್ ಪೋಟೋ, ಪಾಲಕರ ಮೊಬೈಲ್ ಸಂಖ್ಯೆಯೊಂದಿಗೆ https://swd- hmis.karnataka.gov.in/ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಬೇಕು. ಅದರ ಪ್ರತಿಯೊಂದಿಗೆ ಮೇಲ್ಕಂಡ ದಾಖಲೆಗಳನ್ನು ಲಗತ್ತಿಸಿ ದ್ವೀ ಪ್ರತಿಯಲ್ಲಿ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆಯವರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9480843060 ಹಾಗೂ ಕಚೇರಿ ದೂರವಾಣಿ ಸಂಖ್ಯೆ 08351-260583 ಮೂಲಕ ಸಂಪರ್ಕಿಸಬಹುದಾಗಿದೆ.