ವಿಜಯವಾಣಿ ಸುದ್ದಿಜಾಲ ಧಾರವಾಡ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2025-26ನೇ ಸಾಲಿನ ಸಾಮಾನ್ಯ ಪದವಿ ಕೋರ್ಸ್ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ. 25 ಕೊನೆಯ ದಿನ. ಮಾಹಿತಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.