ಜಿಲ್ಲೆ

ಪತ್ರಿಕೋದ್ಯಮ ಪ್ರಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ತಲಾ ಒಬ್ಬರು ಅಭ್ಯರ್ಥಿಗಳನ್ನು ವೃತ್ತಿ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಧಾರವಾಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ 2025ರ ಜನವರಿಯಿಂದ ಡಿಸೆಂಬರ್‌ವರೆಗೆ ತರಬೇತಿ ನೀಡಲಾಗುವುದು. ರಾಜ್ಯದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಸಕ್ತರು ಡಿ. 20ರೊಳಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಡಿ.ಸಿ. ಕಾಂಪೌ0ಡ್, ಧಾರವಾಡ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.