ಕಾರ್ಕಳ: ಕೃಷಿ ಭಾಗ್ಯ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ಕೃಷಿ ಹೊಂಡದ ಸುತ್ತ ತಂತಿ ಬೇಲಿ, ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್‌ಸೆಟ್ ಖರೀದಿ, ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ(ತುಂತುರು/ಹನಿ) ನೀರಾವರಿ ಘಟಕಗಳನ್ನು ನಿರ್ಮಿಸಿಕೊಳ್ಳಲು ಅವಕಾಶವಿದೆ. ಕೃಷಿ ಭಾಗ್ಯ ಪ್ಯಾಕೇಜಿನಲ್ಲಿ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ-ಪಂಗಡದ ರೈತರಿಗೆ ಶೇ.90 ಸಹಾಯಧನ ಪಡೆದುಕೊಳ್ಳಲು ಅವಕಾಶವಿದೆ. ರೈತರು ಸ್ಥಳೀಯ ರೈತ ಸಂಪರ್ಕ ಕೇಂದ್ರದಿಂದ ಅರ್ಜಿ ಪಡೆದುಕೊಳ್ಳಬೇಕು. ಪಾಸ್‌ಪೋರ್ಟ್ ಪೋಟೊ, ಪಹಣಿ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪುಸ್ತಕದ ಪ್ರತಿ ಸಹಿತ ಅಗತ್ಯ ದಾಖಲೆಗಳನ್ನು ಲಗತಿಸಿ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು.