ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಯ್ಕೆಯಾದವರನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ / ಹಿರಿಯ ವಕೀಲರಲ್ಲಿ ತರಬೇತಿಗೆ ನಿಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸೆ.30ರೊಳಗೆ ಸಲ್ಲಿಸಬಹುದು.
ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಜತೆಗೆ ದಾಖಲೆಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, ಮೊದಲ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-27 ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂ: 080-22240449 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ನಗರ ಜಿಲ್ಲಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.