ಬೆಳಗಾವಿ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2023-24ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಥಮ ಪಿ.ಯು.ಸಿ (ಪಿ.ಸಿ.ಎಂ.ಬಿ) ವಿಜ್ಞಾನ ವಿಭಾಗ ಮತ್ತು ವಾಣಿಜ್ಯ (ಸಿ.ಇ.ಟಿ.ಎ) ವಿಭಾಗದ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಳಗಾವಿ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉನ್ನತಿಕರಣಗೊಂಡ ಬೆಳಗಾವಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಮೋ.7406516596), ಮೂಡಲಗಿ ವಸತಿ ಶಾಲೆ (ಮೋ.7411226806) ಹಾಗೂ ಹೂಲಿಕಟ್ಟಿ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಮೋ.7026223373) ಗೆ ಸಂಪರ್ಕಿಸಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ವಿದ್ಯಾರ್ಥಿಗಳು ಜು.31ರೊಳಗೆ ಸಂಬಂಧಪಟ್ಟ ವಸತಿ ಶಾಲೆಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಬೆಳಗಾವಿ ರಾಮತೀರ್ಥನಗರದ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಾರ್ಯಾಲಯ ಹಾಗೂ ದೂ. 0831-2950349ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.