ಜಿಲ್ಲೆ

ಪಿಎಂ ಆವಾಸ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದೀಪಕ ತಲವಾಯಿ

ಬ್ಯಾಡಗಿ: ಪಟ್ಟಣದ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪುರಸಭೆ ವ್ಯಾಪ್ತಿಯ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ 2.0 ಯೋಜನೆಯಲ್ಲಿ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹವಾಗಿವೆ.

ಬ್ಯಾಡಗಿ ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾರ್ಡ್​ಗಳ ವಸತಿ ರಹಿತ ಅಥವಾ ಕಚ್ಚಾ ಮನೆ ಹೊಂದಿರುವ ಅರ್ಹ ಫಲಾನುಭವಿಗಳು ಹೊಸದಾಗಿ ಮನೆ ನಿರ್ವಿುಸಿಕೊಳ್ಳಲು ಇಚ್ಚಿಸಿದ್ದಲ್ಲಿ ಆನ್​ಲೈನ್ ಮೂಲಕ ಪೋರ್ಟಲ್​ನಲ್ಲಿ ಜು. 15 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗಾಗಿ ಪುರಸಭೆ ಆಶ್ರಯ ವಿಭಾಗದ ವಿಷಯ ನಿರ್ವಾಹಕರನ್ನು ಸಂರ್ಪಸಲು ತಿಳಿಸಲಾಗಿದೆ.