ಜಿಲ್ಲೆ

ವಸತಿ ಶಾಲೆ ಪ್ರವೇಶಾತಿಗೆ ಅರ್ಜಿ ಆಹ್ವಾನ

ಆರ್.ಕೃಷ್ಣ

ಮೈಸೂರು: ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2024-25ನೇ ಸಾಲಿನ 6 ನೇ ತರಗತಿಯ ಪ್ರವೇಶಾತಿಗೆ ವಿಶೇಷ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಜುಲೈ 25 ರೊಳಗೆ ತಾಲೂಕಿನ ಎಲ್ಲ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸಫಾಯಿ ಕರ್ಮಚಾರಿಗಳ ಮಕ್ಕಳು, ಮಾನ್ಯುಯಲ್ ಸ್ಕ್ಯಾವೆಂಜರ್, ಬಾಲ ಕಾರ್ಮಿಕರು, ಜೀತ ವಿಮುಕ್ತ ಕಾರ್ಮಿಕರ ಮಕ್ಕಳು, ಗುರುತಿಸಿರುವ ದೇವದಾಸಿಯರ ಮಕ್ಕಳು, ಒಬ್ಬ ಪೋಷಕರನ್ನು ಹೊಂದಿರುವ ಮಕ್ಕಳು, ಚಿಂದಿ ಆಯುವವರ ಮಕ್ಕಳು, ಚಿತಾಗಾರ ಕಾರ್ಮಿಕರ ಮಕ್ಕಳು, ಅನಾಥ ಮಕ್ಕಳು, ಸ್ಮಶಾನ ಕಾರ್ಮಿಕರ ಮಕ್ಕಳು, ಗುರುತಿಸಿರುವ ಅಲೆಮಾರಿ, ಅರೆಅಲೆಮಾರಿ ಸಮುದಾಯ ಮಕ್ಕಳು ಹಾಗೂ 25% ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಎಚ್‌ಐವಿಗೆ ತುತ್ತಾದ ಪೋಷಕರ ಮಕ್ಕಳು, ಸೂಕ್ಷ್ಮ-ಅತೀ ಸೂಕ್ಷ್ಮ ಸಮುದಾಯದ ಮಕ್ಕಳು, ಸೈನಿಕರು ಮತ್ತು ಮಾಜಿ ಸೈನಿಕರ ಮಕ್ಕಳು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪಾಲಕರ ಮಕ್ಕಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.