ಜಿಲ್ಲೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಶ್ರೀ ಮೌನೇಶ್ವರ ಧರ್ಮ ನಿಧಿ ಸಂಸ್ಥೆ ವತಿಯಿಂದ ಜಿಲ್ಲಾ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ 2023-24ರಲ್ಲಿ ಪ್ರಥಮ ಬಾರಿಗೆ ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವೇತನ ವಿತರಣೆ ಹಾಗೂ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಟ್ರಸ್ಟ್​ ಅಧ್ಯಕ್ಷ ಮಹಾರುದ್ರ ಬಡಿಗೇರ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳಿಗೆ ಬಿಳಿ ಹಾಳೆಯಲ್ಲಿ ಅರ್ಜಿ ಬರೆದು ಜು. 30ರೊಳಗೆ ಅಧ್ಯಕ್ಷರು, ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ, ಕಸಬಾಗೌಡರ ಓಣಿ ಧಾರವಾಡ ವಿಳಾಸಕ್ಕೆ ಕಳುಹಿಸಬೇಕು ಎಂದರು.
ಸುಮಿತ್ರಾ ಬಡಿಗೇರ, ವಸಂತ ಕಿಲ್ಲೇದ, ರಾಜೇಂದ್ರ ಮೇಸ್ತ್ರಿ, ಎನ್​.ಕೆ. ಪತ್ತಾರ, ಸೋಮಶೇಖರ ಅರ್ಕಸಾಲಿ, ಇತರರು ಇದ್ದರು.