ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳಿಂದ (6 ರಿಂದ 10ನೇ ತರಗತಿ) 2023-24ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾ ವಿದ್ಯಾರ್ಥಿಗಳು ಸೇವಾಸಿಂಧು ವೆಬ್ ಸೈಟ್ : https://sevasindhuservices.karnataka.gov.in ಮೂಲಕ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು .
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಗೇಟ್ ನಂ.12, ಕೊಠಡಿ ಸಂಖ್ಯೆ :17-18, ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು -560001 ಇಲ್ಲಿ ಖುದ್ದಾಗಿ ಅಥವಾ ದೂ: 080-22239771 ಮೂಲಕ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.