ಜಿಲ್ಲೆ

ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ

ಅವಿನಾಶ್ ಜೈನಹಳ್ಳಿ

ಮೈಸೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಕಾನೂನು ಪದವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದಲ್ಲಿ ಪಡೆದು, ಆಗಸ್ಟ್ 23 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿಯ ದೂ.ಸಂ:0821-2422088 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾoತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.