ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ವರ್ಷ ಮೇಲ್ಪಟ್ಟವರಾಗಿರಬೇಕು. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜೂ. 16ರಂದು ಬೆಳಗ್ಗೆ 11 ಗಂಟೆಗೆ ಕೆ.ಸಿ. ಪಾರ್ಕ್ ಹತ್ತಿರದ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ ಎಂದು ಪ್ರಕಟಣೆ ತಿಳಿಸಿದೆ.