ಜಿಲ್ಲೆ

ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಲಲಾಟಾಕ್ಷ ಎಸ್

ತಿ.ನರಸೀಪುರ: ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಈ ಬಾರಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಂಘದ ಕಾರ್ಯದರ್ಶಿ ಎಸ್.ಜಗದೀಶ್ ಹೇಳಿದರು.


ಸಂಘದ ಆವರಣದಲ್ಲೇ ಸೆ.25ರಂದು ವಾರ್ಷಿಕ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಅರ್ಹ ವಿದ್ಯಾರ್ಥಿಗಳು ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಅಂಕಪಟ್ಟಿ, ಬಿಪಿಎಲ್ ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರದ ನಕಲು ಪ್ರತಿಗಳೊಂದಿಗೆ ಸೆ.20 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: 9901535081/ 9611597530 ಸಂಪರ್ಕಿಸಬಹುದು ಎಂದರು.


ಸಂಘದ ಉಪಾಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿ, ನಿರ್ದೇಶಕರಾದ ತೊಟ್ಟವಾಡಿ ಮರಿಸ್ವಾಮಿ, ನಾಗರಾಜಮೂರ್ತಿ, ಆರ್.ಮಹದೇವ್ ಇದ್ದರು.