ವಿಜಯವಾಣಿ ಸುದ್ದಿಜಾಲ ಧಾರವಾಡ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024- 25ನೇ ಸಾಲಿನಲ್ಲಿ ಪಿಯುಸಿ ಅಥವಾ ಪಿಯು ಸಮಾನಾಂತರ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು https://shp.karnataka.gov.in/bcwd ಮೂಲಕ ಜು. 23ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಽಕಾರಿಗಳು ಗೋಪಾಲ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.