ಜಿಲ್ಲೆ

ಕೌಶಲ್ಯ ತರಬೇತಿಗೆ ನಿರುದ್ಯೋಗಿ ಮಹಿಳೆಯರಿಂದ ಅರ್ಜಿ ಆಹ್ವಾನ

ಆರ್.ತುಳಸಿಕುಮಾರ್

ಬೆಂಗಳೂರು: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023-24ನೇ ಸಾಲಿನ ಮಹಿಳಾ ತರಬೇತಿ ಯೋಜನೆಯಡಿ ನಿರುದ್ಯೋಗಿ ಮಹಿಳೆಯರಿಗೆ ಉಚಿತವಾಗಿ ವಿಕೌಶಲ್ಯ ಆಧಾರಿತ ತರಬೇತಿಗಳನ್ನು ಪಡೆಯಲು ಬೆಂಗಳೂರು ನಗರ ಜಿಲ್ಲೆಯ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

18 ವರ್ಷ ಮೇಲ್ಪಟ್ಟ ಹಾಗೂ 35 ವರ್ಷದ ನಿರುದ್ಯೋಗಿ ಮಹಿಳೆಯರಿಗೆ ತಲಾ 60ರಂತೆ ಬ್ಯೂಟಿ ಥೆರಪಿ, ಹೇರ್ ಸ್ಟೈಲ್ ಹಾಗೂ ಮೇಕಪ್ ಆರ್ಟಿಸ್ಟ್ ಸೇರಿ ಒಟ್ಟು 180 ಮಂದಿಗೆ ಉಚಿತ ತರಬೇತಿಯನ್ನು ಎಸ್‌ಡಬ್ಲ್ಯುಎಸ್‌ಎ ಸಂಸ್ಥೆ ಮೂಲಕ ನೀಡಲಾಗುತ್ತಿದೆ. ಆಸಕ್ತ ಮಹಿಳೆಯರು ಜು.8ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು-560 029 ಅಥವಾ ದೂ: 080-29578688 / 9036846683 ಗೆ ಸಂಪರ್ಕಿಸಬಹುದು ಎಂದು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.