ವಿಜಯವಾಣಿ ಸುದ್ದಿಜಾಲ ಧಾರವಾಡ
ಉತ್ತರಾಖಂಡ್‌ನ ಡೆಹರಾಡೂನ್‌ಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 2026ನೇ ಸಾಲಿನ 8ನೇ ತರಗತಿ ಪ್ರವೇಶಕ್ಕೆ ಕರ್ನಾಟಕದ ಬಾಲಕ ಮತ್ತು ಬಾಲಕಿಯರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜೂ. 1ರಂದು ಅರ್ಹತಾ ಪ್ರವೇಶ ಪರೀಕ್ಷೆ ಬೆಂಗಳೂರಿನಲ್ಲಿ ನಡೆಯಲಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಮಾ. 31ರೊಳಗೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಭವನ್, ನಂ. 58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು- 25 ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.