ಜಿಲ್ಲೆ

ಜಿಲ್ಲೆಯಲ್ಲಿ ಗ್ರಾಮ ಒನ್ ತೆರೆಯಲು ಅರ್ಜಿ: ಆಸಕ್ತರು ಜು.15ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಒನ್ ಸರ್ಕಾರದ ಮಹತ್ವಾಕಾಂಕ್ಷೆಯ ಸೇವಾ ಸಿಂಧು ಯೋಜನೆಯಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಯೋಜನೆಯಡಿ ನಾಗರಿಕ ಸೇವೆಗಳನ್ನು ಪಡೆಯಬಹುದಾಗಿದೆ. ಆಸಕ್ತರು ಜು.15ರೊಳಗೆ ವೆಬ್‌ಸೈಟ್ https://kal-mys.gramaone.karnataka.gov.in/index.php/applicant-registration-initial-step ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.