ಜಿಲ್ಲೆ

ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜ. 10ರಂದು ಬೆಳಗ್ಗೆ 11 ಗಂಟೆಗೆ ನಗರದ ಕೆ.ಸಿ. ಪಾರ್ಕ್ ಹತ್ತಿರದ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.