ಜಿಲ್ಲೆ

ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಜಯವಾಣಿ ಸುದ್ದಿಜಾಲ ಧಾರವಾಡ
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಡಿ. 21ರಿಂದ 23ರವರೆಗೆ ಆರ್ಥಿಕತೆ ಮತ್ತು ಪೌಷ್ಠಿಕತೆಗಾಗಿ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳ ಆಯೋಜಿಸಲಾಗಿದೆ. ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ರೈತ, ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಹ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕರು ಆಥವಾ ಮುಖ್ಯಸ್ಥರು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಕುಂಬಾಪುರ ಫಾರ್ಮ್ ಧಾರವಾಡ ಕಚೇರಿಯಿಂದ ಪಡೆದು ನ. 5ರೊಳಗೆ ಸಲ್ಲಿಸಬೇಕು ಎಂದು ಧಾರವಾಡ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವು ಪ್ರಕಟಣೆಯಲ್ಲಿ ತಿಳಿಸಿದೆ.