ವಿಜಯವಾಣಿ ಸುದ್ದಿಜಾಲ ಧಾರವಾಡ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳಿಂದ 2025- 26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಒನ್, ಹು-ಧಾ-ಒನ್ ಕೇಂದ್ರಗಳಲ್ಲಿ ಜು. 2ರೊಳಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು www.kudc.karnataka.gov.in ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.