ವಿಜಯಪುರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ&ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆ ಟಕ ಯೋಜನೆಯಡಿ 1 ಲಕ್ಷ ರೂ. ಸಹಾಯಧನ ಹಾಗೂ 50 ಸಾವಿರ ರೂ. ಬೀಜಧನ (ಶೇ. 4 ರಷ್ಟು ಬಡ್ಡಿ ದರ), ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ 1.25ಲಕ್ಷ ರೂ.ಗಳ ಸಹಾಯಧನ, ಸ್ವಾವಲಂಬಿ ಸಾರಥಿ ಯೋಜನೆಯ, ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಸಾಲದ ಮೊತ್ತದ ಶೇ.75 ರಷ್ಟು ಸಹಾಯಧನ ಅಥವಾ 4 ಲಕ್ಷ ರೂ. ಗರಿಷ್ಠ ಮೊತ್ತ ನೀಡಲಾಗುವುದು.
ಅಲ್ಲದೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಇತರೆ ಉದ್ದೇಶಕ್ಕಾಗಿ ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗೆ ಟಕ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಠ 2ಲಕ್ಷ ರೂ. ಸಹಾಯಧನ ನೀಡಲಾಗುವುದು.ಮೈಕ್ರೋ ಕ್ರೆಡಿಟ್(ಪ್ರೇರಣಾ) ಯೋಜನೆ, (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಟಕ ವೆಚ್ಚ 5 ಲಕ್ಷ ರೂ. ಸಹಾಯಧನ 2.50 ಲಕ್ಷ ರೂ., ಬೀಜಧನ 2.50 ಲಕ್ಷ ರೂ. (ಶೇ 4 ರಷ್ಟು ಬಡ್ಡಿ ದರ), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
2023&24 ಹಾಗೂ 2024&25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವರು ಮತ್ತೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಅರ್ಜಿದಾರರು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೆ. 17 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಕಚೇರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.