ಜಿಲ್ಲೆ

ವಿವಿಧ ಯೋಜನೆಯಡಿ ಸಾಲ&ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಗಿರೀಶ ಸಗರ

ವಿಜಯಪುರ: ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025&26ನೇ ಸಾಲಿಗೆ ಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ&ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕ್​ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮೈಕ್ರೋ ಕ್ರೆಡಿಟ್​ ಯೋಜನೆಗಳಡಿ ಆನ್​ಲೈನ್​ ಅರ್ಜಿ ಸಲ್ಲಿಸಬಹುದಾಗಿದೆ.

ಸೆ. 17 ರಂದು ಅರ್ಜಿ ಸಲ್ಲಿಕೆಗೆ ಕೊನೇ ದಿನ. 2023&24 ಮತ್ತು 2024&25ನೇ ಸಾಲಿನಲ್ಲಿ ಆನ್​ಲೈನ್​ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಸಲ್ಲಿಸಬಾರದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಂಪರ್ಕಿಸುವಂತೆ ಇಲಾಖಾ ಉಪ ನಿರ್ದೇಶಕ ಮಹೇಶ ಪೋತದಾರ ತಿಳಿಸಿದ್ದಾರೆ.