ಜಿಲ್ಲೆ

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಿಜಯವಾಣಿ ಸುದ್ದಿಜಾಲ ಧಾರವಾಡ

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಅಽಕ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದೇ ಇಲಾಖೆಯ ಕಾಯಂ ನೌಕರರಾಗಿರಬೇಕು. ವಿದ್ಯಾರ್ಥಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು. ಅಗತ್ಯ ದಾಖಲೆಗಳೊಂದಿಗೆ https://ksgeanews.blogspot.com/2025/05/sslc-puc-2025.html ಮೂಲಕ ಮೇ 31ರೊಳಗೆ ಅರ್ಜಿ ಸಲ್ಲಿಸಬೇಕು. ಒಂದು ಪ್ರತಿಯನ್ನು ತಾಲೂಕು ಅಥವಾ ಜಿಲ್ಲಾ ಶಾಖೆಯ ಕಚೇರಿಗೆ ತಲುಪಿಸಬೇಕು ಎಂದು ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.